×
Ad

ರಾಜಾಜಿನಗರದ ರಾಮಮಂದಿರ ಸೀಲ್‍ಡೌನ್

Update: 2020-06-20 18:31 IST

ಬೆಂಗಳೂರು, ಜೂ.20: ರಾಜಾಜಿನಗರ ರಾಮಮಂದಿರದಲ್ಲಿ ಕೆಲಸ ಮಾಡುತ್ತಿದ್ದ 60 ವರ್ಷದ ವ್ಯಕ್ತಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ರಾಮಮಂದಿರವನ್ನು ಸೀಲ್ ಡೌನ್ ಮಾಡಿದ್ದಾರೆ.

ಶನಿವಾರ ರಾಮಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಗೆ ಕೊರೋನ ಸೋಂಕು ಪತ್ತೆಯಾಗಿದ್ದು, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಆರು ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ ಒಂದು ವಾರಗಳ ಕಾಲ ರಾಮಮಂದಿರವನ್ನು ಸೀಲ್ ಡೌನ್ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News