ಸಾಮಾನ್ಯ ಪಠ್ಯಕ್ರಮದೊಂದಿಗೆ ಏಕರೂಪ ಶಿಕ್ಷಣ ವ್ಯವಸ್ಥೆ ಕೋರಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ

Update: 2020-06-20 16:00 GMT

ಹೊಸದಿಲ್ಲಿ,ಜೂ.20: ದೇಶಾದ್ಯಂತ 6ರಿಂದ 14 ವರ್ಷ ಪ್ರಾಯದ ಮಕ್ಕಳಿಗೆ ಸಾಮಾನ್ಯ ಪಠ್ಯಕ್ರಮವನ್ನು ಹೊಂದಿರುವ ಏಕರೂಪ ಶಿಕ್ಷಣ ವ್ಯವಸ್ಥೆಯನ್ನು ಕೋರಿ ಬಿಜೆಪಿ ನಾಯಕ ಹಾಗೂ ನ್ಯಾಯವಾದಿ ಅಶ್ವಿನಿಕುಮಾರ ಉಪಾಧ್ಯಾಯ ಅವರು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ್ದಾರೆ.

 ಐಸಿಎಸ್‌ಇ ಮತ್ತು ಸಿಬಿಎಸ್‌ಇಗಳನ್ನು ವಿಲೀನಗೊಳಿಸಿ ‘ಒಂದು ದೇಶ ಒಂದು ಶಿಕ್ಷಣ ಮಂಡಳಿ’ಯನ್ನು ಸ್ಥಾಪಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲಿಸಲು ನಿರ್ದೇಶ ನೀಡುವಂತೆ ಅವರು ಅರ್ಜಿಯಲ್ಲಿ ಕೋರಿದ್ದಾರೆ.

ಸಂವಿಧಾನದ 21ಎ ವಿಧಿ (ಮುಕ್ತ ಮತ್ತು ಕಡ್ಡಾಯ ಶಿಕ್ಷಣ)ಯ ಆಶಯಕ್ಕನುಗುಣವಾಗಿ ಸಾಮಾನ್ಯ ಪಠ್ಯಕ್ರಮದೊಂದಿಗೆ ಏಕರೂಪ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಲು ಕೇಂದ್ರ ಮತ್ತು ರಾಜ್ಯಗಳು ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಕೇಂದ್ರ ಮತ್ತು ರಾಜ್ಯಗಳು ಮೌಲ್ಯಾಧಾರಿತ ಏಕರೂಪ ಶಿಕ್ಷಣವನ್ನು ಒದಗಿಸದಿದ್ದರೆ ವಿಧಿ 21ಎ ಅಡಿ ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸಲು ಮಕ್ಕಳಿಗೆ ಸಾಧ್ಯವಾಗದಿರಬಹುದು. ಸಾಮಾಜಿಕ-ಆರ್ಥಿಕ ಸಮಾನತೆ ಮತ್ತು ನ್ಯಾಯವನ್ನು ಸಾಧಿಸಲು ದೇಶದ ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಪಠ್ಯಕ್ರಮವು ಒಂದೇ ಆಗಿರುವುದು ಅಗತ್ಯವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News