ಉಡುಪಿ: ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡುವವರ ವಿರುದ್ದ ಕ್ರಿಮಿನಲ್ ದಾವೆ
Update: 2020-06-20 21:51 IST
ಉಡುಪಿ, ಜೂ.20: ಹೋಮ್ ಕ್ವಾರಂಟೈನ್ ಬಗ್ಗೆ ಸರಕಾರ ಹಾಗೂ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ದಂಡಾಧಿಕಾರಿ ಹೊರಡಿಸುವ ಆದೇಶ ಹಾಗೂ ಕೋವಿಡ್ ರೋಗವನ್ನು ತಡೆಗಟ್ಟುವ ಸಲುವಾಗಿ ಹೊರಡಿಸಲಾಗಿರುವ ಇತರೆ ನಿರ್ದೇಶನಗಳನ್ನು ಪಾಲಿಸದೇ ಇದ್ದವರ ಮೇಲೆ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಅಧಿಕಾರವನ್ನು ಡಿಸಾಸ್ಟರ್ ಮೆನೇಜ್ ಮೆಂಟ್ ಆಕ್ಟ್ 2005, ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಮತ್ತು ಐಪಿಸಿ ಸೆಕ್ಷನ್ 188 ಪ್ರಕಾರ, ಹೋಂ ಕ್ವಾರಂಟೈನ್ ಬಗ್ಗೆ ನಿಗಾ ಇರಿಸುವ ಪ್ಲೈಯಿಂಗ್ ಸ್ಕ್ವಾಡ್‌ಅಧಿಕಾರಿಗಳಿಗೆ, ಉಡುಪಿ ನಗರಸಭೆಯ ಪೌರಾಯುಕ್ತರು, ಕುಂದಾಪುರ, ಕಾರ್ಕಳ ಮತ್ತು ಕಾಪು ಪುರಸಭೆ, ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗಳು ಅಲ್ಲದೇ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಪ್ರತ್ಯಾಯೋಜಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.