ಕೊರೋನ ನಿಯಂತ್ರಣ: ಪೌರಕಾರ್ಮಿಕರಿಗೆ ತರಬೇತಿ
Update: 2020-06-20 22:25 IST
ಉಡುಪಿ, ಜೂ.20: ಉಡುಪಿ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಕೊರೋನ ವೈರಸ್ ಸಾಂಕ್ರಾಮಿಕ ರೋಗ ನಿಯಂತ್ರಣ ಮತ್ತು ಪರಿಸರವನ್ನು ಸ್ವಚ್ಛಗೊಳಿಸುವ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತರಬೇತಿ ಕಾರ್ಯಾಗಾರವು ಶನಿವಾರ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಿತು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ನಗರಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅರುಣ್ ಪ್ರಭಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಡಾ.ದಿವ್ಯ ಪೌರಕಾರ್ಮಿಕರಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಪರಿಸರ ಅಭಿಯಂತರ ಸ್ನೇಹ ಕೆ.ಎಸ್., ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ, ಪೌರ ಸೇವಾ ನೌಕರರ ಸಂಘದ ಅಧ್ಯಕ್ಷ ಮನೋಹರ್ ಜತನ್ನ ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಕ ಕರುಣಾಕರ ವಿ ಕಾರ್ಯಕ್ರಮ ನಿರೂಪಿಸಿದರು.