ಪೇದೆಗೆ ಕೊರೋನ: ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಸೀಲ್ ಡೌನ್

Update: 2020-06-20 17:00 GMT

ಬೆಂಗಳೂರು, ಜೂ.20: ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಡಿಸಿಪಿ ಕುಲದೀಪ್ ಜೈನ್, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆಗೆ ಕೊರೋನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಪೇದೆಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಶುಕ್ರವಾರ ಬಂದ ವರದಿಯಲ್ಲಿ ಪೇದೆಗೆ ಕೊರೋನ ಸೋಂಕು ದೃಢಪಟ್ಟಿದೆ. ಆದ್ದರಿಂದ ಕಬ್ಬನ್ ಪಾರ್ಕ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೊರೋನ ಸೋಂಕಿತ ಪೇದೆಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಇನ್ನು ಠಾಣೆಯಲ್ಲಿ 60 ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದು, ಎಲ್ಲರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಠಾಣೆಯ ಹೊರಗಿನಿಂದಲೇ ನಾವು ಕಾರ್ಯ ನಿರ್ವಹಿಸುತ್ತೇವೆ. ಇದಕ್ಕಾಗಿ ಇಲಾಖೆಯ ಕಾರುಗಳನ್ನು ಬಳಕೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News