ವಿಜಯಪುರ: ತಹಶೀಲ್ದಾರ್ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ

Update: 2020-06-20 18:56 GMT

ವಿಜಯಪುರ,ಜೂ.20: ತಹಶೀಲ್ದಾರ್ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿಜಯಪುರ ನಗರದ ನೂತನ ಪ್ರವಾಸಿ ಮಂದಿರದ‌ ಕೋಣೆಯ ಕಟ್ಟಡದ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆ‌ ಮಾಡಿಕೊಂಡಿದ್ದ ವ್ಯಕ್ತಿಯನ್ನು ಆರೀಫ್ ಜುನೇದಿ ( 39 )ಎಂದು‌ ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಾಲ್ಕು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದು, ಸೇವೆಗೂ ಹಾಜರಾಗಿರಲ್ಲಿಲ್ಲ.

ಸ್ಥಳಕ್ಕೆ ವಿಜಯಪುರ ತಹಶೀಲ್ದಾರ ಮೋಹನಕುಮಾರಿ ಹಾಗೂ ಡಿವೈಎಸ್ಪಿ ಲಕ್ಷ್ಮೀ ನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಶವವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News