ಪ್ರಾಪರ್ಟಿ ಕಾರ್ಡ್, ಇ-ಖಾತಾ, ಆರ್‌ಟಿಸಿ ಸಮಸ್ಯೆ ಕುರಿತು ಶಾಸಕ ಕಾಮತ್ ಸಭೆ
ಮಂಗಳೂರು, ಜೂ.21: ಪ್ರಾಪರ್ಟಿ ಕಾರ್ಡ್, ಇ-ಖಾತಾ ಮತ್ತು ಆರ್‌ಟಿಸಿಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಶನಿವಾರ ದ.ಕ.ಜಿಪಂ ನೇತ್ರಾವವತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಇ-ಖಾತಾ ಪಡೆಯಲು ಸಾರ್ವಜನಿಕರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅರ್ಜಿ ಸಲ್ಲಿಸಿದ 20 ದಿನಗಳೊಳಗೆ ಇ-ಖಾತಾ ನೀಡಬೇಕು. ಪ್ರಾಪರ್ಟಿ ಕಾರ್ಡ್, ಇ-ಖಾತಾ ಮತ್ತು ಆರ್‌ಟಿಸಿಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಮನಪಾ ಪಾಲಿಕೆ ಮತ್ತು ಕಂದಾಯ ಇಲಾಖೆ, ಎ.ಡಿ.ಎಲ್.ಆರ್ (ನಗರ ಭೂ ದಾಖಲೆ) ಇಲಾಖೆಯ ಅಧಿಕಾರಿಗಳು ಕ್ರಮ ಜರುಗಿಸಬೇಕು ಎಂದರು.
ಸಭೆಯಲ್ಲಿ ಮನಪಾ ಉಪ ಆಯುಕ್ತ ಸಂತೋಷ್, ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರೇಮಾನಂದ ಶೆಟ್ಟಿ, ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ಶಕಿಲಾ ಕಾವಾ, ತಹಶೀಲ್ದಾರ್ ಗುರುಪ್ರಸಾದ್, ವಿವಿಧ ಇಲಾಖೆಯ ಅಧಿಕಾರಿಗಳು ಕ್ರೆಡಾಯ್ ಅಸೋಸಿಯೇಶನ್‌ನ ಪದಾಧಿಕಾರಿಗಳು, ಇಂಜಿನಿಯರ್ಸ್ ಅಸೋಸಿಯೇಶನ್, ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.