×
Ad

ಗೃಹ ಕಚೇರಿ ಕೃಷ್ಣಾದ ಸಿಬ್ಬಂದಿಗೆ ಜೂ.22ರಂದು ಕೊರೋನ ಪರೀಕ್ಷೆ

Update: 2020-06-21 18:20 IST

ಬೆಂಗಳೂರು, ಜೂ.21: ಸೀಲ್‍ಡೌನ್ ಆತಂಕಕ್ಕೆ ಸಿಲುಕಿದ್ದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದ ಎಲ್ಲಾ ಸಿಬ್ಬಂದಿಯನ್ನು ನಾಳೆ(ಜೂ.22) ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಕೃಷ್ಣಾದ ಗೇಟ್ ಎದುರು ಕರ್ತವ್ಯ ನಿರ್ವಹಿಸುವ ಭದ್ರತಾ ಸಿಬ್ಬಂದಿ, ಅತಿಥಿಗಳ ವಿವರ ದಾಖಲಿಸಿಕೊಳ್ಳುವ ಸಿಬ್ಬಂದಿ, ಕೃಷ್ಣಾದ ಒಳಗಡೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯೂ ಸೇರಿ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಸಿಬ್ಬಂದಿಯನ್ನೂ ನಾಳೆ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಕೃಷ್ಣಾದ ಜೊತೆಗೆ ಮುಖ್ಯಮಂತ್ರಿಗಳ ಸರಕಾರಿ ನಿವಾಸ ಕಾವೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರೂ ಸೇರಿ ಎಲ್ಲಾ ಸಿಬ್ಬಂದಿಗೂ ಕೊರೋನ ಪರೀಕ್ಷೆ ನಡೆಸಲಾಗುತ್ತದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಕಾನ್‍ಸ್ಟೇಬಲ್ ಒಬ್ಬರ ಪತಿಗೆ ಕೊರೋನ ಪಾಸಿಟಿವ್ ಬಂದು ಆತಂಕ ಸೃಷ್ಟಿಸಿತ್ತು. ಆದರೆ, ಮಹಿಳಾ ಕಾನ್‍ಸ್ಟೆಬಲ್ ಕೊರೋನ ಪರೀಕ್ಷೆ ವರದಿ ನೆಗೆಟಿವ್ ಬಂದಿತ್ತು. ಆದರೂ ಹೆಚ್ಚಿನ ಮುಂಜಾಗ್ರತಾ ಕ್ರಮವಾಗಿ ನಾಳೆ(ಜೂ.22) ಸಿಎಂ ಗೃಹ ಕಚೇರಿ ಕೃಷ್ಣಾ ಹಾಗೂ ಕಾವೇರಿ ನಿವಾಸದ ಎಲ್ಲಾ ಸಿಬ್ಬಂದಿಯನ್ನೂ ಕೊರೋನ ತಪಾಸಣೆಗೆ ಒಳಪಡಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News