ಎಸ್‌ಡಿಪಿಐ ದ.ಕ. ಜಿಲ್ಲಾ ಸಮಿತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Update: 2020-06-21 13:32 GMT

ಮಂಗಳೂರು, ಜೂ.21: ಎಸ್‌ಡಿಪಿಐ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜಿಲ್ಲಾ ಕಚೇರಿಯ ಮುಂದೆ ಧ್ವಜಾರೋಹಣ ಮತ್ತು ರಕ್ತದಾನ ಶಿಬಿರವು ರವಿವಾರ ಜರುಗಿತು.

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಧ್ವಜಾರೋಹಣಗೈದು ಸಂದೇಶ ಭಾಷಣ ಮಾಡಿದರು. ಈ ಸಂದರ್ಭ ಲಡಾಖ್‌ನಲ್ಲಿ ಚೀನಾ - ಭಾರತ ಗಡಿ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ವೀರ ಯೋಧರಿಗೆ ಸಂತಾಪ ಸೂಚಿಸಿ ಮೌನ ಪ್ರಾರ್ಥನೆ ನಡೆಸಲಾಯಿತು.

ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರದ ಸಭಾ ಕಾರ್ಯಕ್ರಮವನ್ನು ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಉದ್ಘಾಟಿಸಿದರು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ರಕ್ತದಾನ ಮಾಡುವ ರಕ್ತದಾನ ಶಿಬಿರಕ್ಕೆ ಅಧಿಕೃತ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿ ವಿಭಾಗದ ಉಸ್ತುವಾರಿ ಆಶೋಕ್, ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಗೂಡಿನಬಳಿ, ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಪಿಎಫ್‌ಐ ಜಿಲ್ಲಾ ಕಾರ್ಯದರ್ಶಿ ಹರ್ಷದ್, ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ, ಜಿಲ್ಲಾ ಕೋಶಾಧಿಕಾರಿ ನೂರುಲ್ಲಾ ಕುಳಾಯಿ,ಎಸ್‌ಡಿಟಿಯು ಜಿಲ್ಲಾಧ್ಯಕ್ಷ ಖಾದರ್ ಫರಂಗಿಪೇಟೆ, ಎಸ್‌ಡಿಪಿಐ ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸುಹೈಲ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಸ್ವಾಗತಿಸಿ, ವಂದಿಸಿದರು.

ಜಿಲ್ಲಾದ್ಯಂತ ಎಲ್ಲಾ ಅಸೆಂಬ್ಲಿಗಳ ಗ್ರಾಮ ಮಟ್ಟದಲ್ಲಿ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ರಕ್ತದಾನ, ಶ್ರಮದಾನ, ಸ್ವಚ್ಛತೆ, ಸಸಿ ಮತ್ತು ಹಣ್ಣು ಹಂಪಲು ವಿತರಣೆ, ಮಾಸ್ಕ್ ವಿತರಣೆ, ಸ್ಯಾನಿಟೈಸರ್ ವಿತರಣೆ ಇತ್ಯಾದಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News