×
Ad

ಉಡುಪಿ ಜಿಲ್ಲೆಯಲ್ಲಿ ರವಿವಾರ ಕೊರೋನ ಪಾಸಿಟಿವ್ ಪ್ರಕರಣ ಇಲ್ಲ

Update: 2020-06-21 19:15 IST
ಸಾಂದರ್ಭಿಕ ಚಿತ್ರ

ಉಡುಪಿ, ಜೂ.21: ಜಿಲ್ಲೆಯಿಂದ ರವಿವಾರ ಕೋವಿಡ್-19ರಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ. 27 ಮಂದಿಯ ಗಂಟಲುದ್ರವ ಮಾದರಿ ವರದಿ ನೆಗೆಟಿವ್ ಆಗಿ ಬಂದಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಒಟ್ಟು 112 ಮಂದಿಯ ಗಂಟಲು ದ್ರವದ ಸ್ಯಾಂಪಲ್‌ಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 17 ಮಂದಿ, ಕೋವಿಡ್ ಸಂಪರ್ಕಿತರು 22, ಉಸಿರಾಟ ತೊಂದರೆಯವರು ಐವರು, ಶೀತಜ್ವರದಿಂದ ಬಳಲುವ 8 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್ ಪ್ರದೇಶಗಳಿಂದ ಬಂದ 60 ಮಂದಿಯ ಸ್ಯಾಂಪಲ್ ಗಳಿವೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 13412 ಕ್ಕೇರಿದೆ. ಇವುಗಳಲ್ಲಿ ಈವರೆಗೆ 12082 ನೆಗೆಟಿವ್, 1063 ಪಾಸಿಟಿವ್ ಆಗಿವೆ. ಇನ್ನು ಒಟ್ಟು 267 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ. ರವಿವಾರ  11 ಮಂದಿಯನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ ಕೋವಿಡ್ ಸಂಪರ್ಕಿತರು ಒಬ್ಬರು, ಉಸಿರಾಟ ತೊಂದರೆಯವರು ಏಳು ಮಂದಿ ಹಾಗೂ ಶೀತಜ್ವರದಿಂದ ಬಳಲುವ ಮೂವರಿದ್ದಾರೆ ಎಂದರು.

6 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ರವಿವಾರ ಸೋಂಕಿನಿಂದ ಗುಣಮುಖರಾದ 6 ಮಂದಿ ಸೇರಿದಂತೆ ಈವರೆಗೆ ಒಟ್ಟು 965 ಮಂದಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದೀಗ ಇನ್ನು 96 ಮಂದಿ ಮಾತ್ರ ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯತ್ತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

ಜಿಲ್ಲೆಯ ಆಸ್ಪತ್ರೆಗಳ ಐಸೋಲೇಶನ್ ವಾರ್ಡ್‌ಗಳಿಂದ ಇಂದು ಇಬ್ಬರು ಬಿಡುಗಡೆಗೊಂಡಿದ್ದು, 81 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ಗುಣಲಕ್ಷಣದ 19 ಮಂದಿ ಸೇರಿದಂತೆ ಒಟ್ಟು 5713 ಮಂದಿಯನ್ನು ಕೊರೋನ ತಪಾಸಣೆಗೆ ಈವರೆಗೆ ನೊಂದಾಯಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 741 ಮಂದಿ ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಡಾ.ಸುಧೀರ್‌ಚಂದ್ರ ಸೂಡ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News