ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಘೋಷಣೆ

Update: 2020-06-21 15:26 GMT

ಬೆಂಗಳೂರು, ಜೂ.21: ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಜೂ.21ರಿಂದ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 21 ರಿಂದ 25ರವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಎಂದು ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News