ತರೀಕೆರೆ: ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು
Update: 2020-06-22 10:06 IST
ಚಿಕ್ಕಮಗಳೂರು, ಜೂ.22: ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತರೀಕೆರೆ ತಾಲೂಕಿನ ಭಗತಿಕಟ್ಟೆ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.
ಮೃತರನ್ನು ತರೀಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ (35) ಎಂದು ಗುರುತಿಸಲಾಗಿದೆ.
ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಣಿಕಂಠ ನಿನ್ನೆ ರಾತ್ರಿ ಬೈಕಿನಲ್ಲಿ ತೆರಳುತ್ತಿದ್ದಾಗ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.