ಕೊರೋನ ಶಂಕಿತ ಮಹಿಳೆ ಮೃತ್ಯು: ಚಿಕಿತ್ಸೆ ನೀಡಿದ್ದ ಆಸ್ಪತ್ರೆ ಸ್ವಯಂಪ್ರೇರಿತ ಸೀಲ್‌ಡೌನ್
Update: 2020-06-22 12:02 IST
ಚಾಮರಾಜನಗರ, ಜೂ.22: ಅನಾರೋಗ್ಯಕ್ಕೀಡಾಗಿ ಶಂಕಿತ ಕೋವಿಡ್-19 ಸೋಂಕಿನ ಕಾರಣದಿಂದ ಚಾಮರಾಜ ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ.
ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 29 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಇವರ ಗಂಟಲು ದ್ರವ ಪರೀಕ್ಷಾ ವರದಿ ಇನ್ನಷ್ಟೇ ಬರಬೇಕಿದೆ.
ಅನಾರೋಗ್ಯಕ್ಕೀಡಾಗಿದ್ದ ಈ ಮಹಿಳೆ ಮೊದಲು ಬಸವರಾಜೇಂದ್ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯನ್ನು ಸ್ವಯಂಪ್ರೇರಿತವಾಗಿ ಸೀಲ್‌ಡೌನ್ ಮಾಡಲಾಗಿದೆ. ಸ್ಯಾನಿಟೈಸ್ ಮಾಡಲಾಗಿದೆ. ಇಬ್ಬರು ವೈದ್ಯರು, ಐವರು ವೈದ್ಯಕೀಯ ಸಿಬ್ಬಂದಿ ಸ್ವಯಂಪ್ರೇರಿತವಾಗಿ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ