ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪ: 28 ಮಂದಿ ವಿರುದ್ಧ ಪ್ರಕರಣ ದಾಖಲು

Update: 2020-06-22 07:05 GMT

ಕಲಬುರಗಿ, ಜೂ.22: ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕವಾಗಿ ತಿರುಗಾಡಿದ ಆರೋಪದಲ್ಲಿ 28 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, 8 ಮಂದಿಯನ್ನು ಮರಳಿ ಸಾಂಸ್ಥಿಕ ಕ್ವಾರಂಟೈನ್ ಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಕೊರೋನ ವೈರಸ್ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸೋಂಕಿತ ರೋಗಿಯ ದ್ವಿತೀಯ ಸಂಪರ್ಕ ಹೊಂದಿದ ಹೊರ ರಾಜ್ಯಗಳಿಂದ ಬಂದ ಗರ್ಭಿಣಿಯರು, 1೦ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, 65 ವರ್ಷ ಮೇಲ್ಪಟ್ಟ ಹಿರಿಯರ ಮತ್ತು ಬೇರೆ ರೋಗದಿಂದ ಬಳಲುತ್ತಿರುವರ ಹಿತದೃಷ್ಟಿಯಿಂದ ಅವರನ್ನು ಸಾಂಸ್ಥಿಕ ಕ್ಟಾರೆಂಟೈನ್ ಮಾಡುವ ಬದಲಾಗಿ ಹೋಂ ಕ್ವಾರೈಂಟೈನ್ ನಲ್ಲಿ ನಿಗಾ ವಹಿಸಲಾಗುತ್ತಿದೆ. ಆದರೆ ಕೆಲವರು ಅನಾವಶ್ಯಕವಾಗಿ ನಿಯಮ ಉಲ್ಲಂಘನೆ ಮಾಡಿ ಹೋಂ ಕ್ವಾರಂಟೈನ್ ನಿಂದ, ಹೊರ ಬಂದು ಸಾರ್ವಜನಿಕವಾಗಿ ಓಡಾಡುತ್ತಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ 28 ಮಂದಿಯ ಮೇಲೆ ಪ್ರಕರಣ ದಾಖಲಿಸಿ ಎಚ್ಚರಿಕೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News