ರೈಲು ಹಳಿಗೆ ತಲೆ ಇಟ್ಟು ವ್ಯಕ್ತಿ ಆತ್ಮಹತ್ಯೆ

Update: 2020-06-22 11:55 GMT

ಬೆಂಗಳೂರು, ಜೂ.22: ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ..

ಯಲಹಂಕದ ನಿವಾಸಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ತಿಳಿದುಬಂದಿದ್ದು, ಅವರ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬ ಕಲಹದಿಂದ ಬೇಸತ್ತಿದ್ದ ಈತ ಮದ್ಯ ಸೇವಿಸಿ ರೈಲ್ವೆ ಹಳಿಗಳ ಮೇಲೆ ಮಲಗಿದ್ದಾನೆ. ಈ ವೇಳೆ, ರೈಲು ಈತನ ಮೇಲೆಯೇ ಚಲಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಯಲಹಂಕ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News