×
Ad

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಂದೆಗೆ ಕೊರೋನ ಸೋಂಕು ದೃಢ

Update: 2020-06-22 18:53 IST
ಡಾ.ಕೆ.ಸುಧಾಕರ್

ಬೆಂಗಳೂರು, ಜೂ.22: ಕರ್ನಾಟಕ ಸರಕಾರದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ತಂದೆಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್ ಅವರು, ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ತಿಳಿಸಿದ್ದಾರೆ. 

ಈ ಮೊದಲು ಸುಧಾಕರ್ ಅವರ ತಂದೆ ಆಸ್ಪತ್ರೆಗೆ ದಾಖಲಾದ ಬಗ್ಗೆ ಟ್ವೀಟ್ ಮಾಡಿದ್ದ ಅವರು, ಕೋವಿಡ್ ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ ಎಂದು ತಿಳಿಸಿದ್ದರು. "ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ" ಎಂದು ಟ್ವೀಟ್ ಮಾಡಿದ್ದರು.

ನಮ್ಮ ಮನೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕಿಗೂ ಕೊರೋನ ಸೋಂಕು ಇರುವುದು ದೃಢಪಟ್ಟಿದ್ದು, ಅವರೂ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೂ ಬೇಗ ಗುಣಮುಖರಾಗಲಿ ಎಂದು ನಮ್ಮ ಪ್ರಾರ್ಥನೆ

-ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News