×
Ad

ಸರಗಳ್ಳತನ ಆರೋಪಿಗೆ ಕೊರೋನ: ತಿಲಕ್ ನಗರ ಪೊಲೀಸ್ ಠಾಣೆ ಸೀಲ್‍ಡೌನ್

Update: 2020-06-22 20:27 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.22: ಸರಗಳ್ಳತನ ಆರೋಪದಡಿ ಬಂಧಿತನಾಗಿದ್ದ ಆರೋಪಿಯೋರ್ವನಿಗೆ ಕೊರೋನ ಸೋಂಕು ಪತ್ತೆಯಾದ ಹಿನ್ನೆಲೆ ತಿಲಕ್‍ನಗರ ಪೊಲೀಸ್ ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್‍ಡೌನ್ ಮಾಡಲಾಗಿದೆ.

ತಿಲಕ್‍ನಗರ ಠಾಣೆ ಆರಕ್ಷಕ ಅಧಿಕಾರಿ ಸೇರಿ ಆರೋಪಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 12 ಮಂದಿ ಪೊಲೀಸರನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ವಾರಂಟೈನ್‍ಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ನಗರದಲ್ಲಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಬೈಕ್‍ನಲ್ಲಿ ತೆರಳಿ ಆರೋಪಿ ಸರಗಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಈತನ ವಿರುದ್ಧ ತಿಲಕ್‍ನಗರ ಹಾಗೂ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತಿಲಕ್‍ನಗರ ಪೊಲೀಸರು ತನಿಖೆ ನಡೆಸಿ ಆರೋಪಿಯಿಂದ ಸುಮಾರು 70 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ಕೊರೋನ ತಪಾಸಣೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಬೆಳಕಿಗೆ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News