×
Ad

ಕೊರೋನ ಸೋಂಕು ಭೀತಿ: ನಿಮ್ಹಾನ್ಸ್ ಆಸ್ಪತ್ರೆಯ ಐಸಿಯು ವಾರ್ಡ್ ಸ್ಥಗಿತ

Update: 2020-06-22 20:47 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.22: ಕೊರೋನ ಸೀಂಕು ಭೀತಿ ಹಿನ್ನೆಲೆ ನಗರದ ನಿಮ್ಹಾನ್ಸ್ ಆಸ್ಪತ್ರೆಯ ಐಸಿಯು ವಾರ್ಡ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ನಿಮ್ಹಾನ್ಸ್ ಆಸ್ಪತ್ರೆಯ ಮಾನಸಿಕ ಅಸ್ವಸ್ಥರಿಗಿರುವ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಬ್ಬ ರೋಗಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆ ಈ ರೋಗಿಯ ಸಂಪರ್ಕದಲ್ಲಿದ್ದ ನಾಲ್ವರನ್ನು ಕೂಡಲೇ ಕ್ವಾರಂಟೈನ್ ಮಾಡಲಾಗಿದ್ದು, ಆಸ್ಪತ್ರೆಯ ಐಸಿಯು ವಾರ್ಡ್ ಅನ್ನು ಸ್ಥಗಿತ ಮಾಡಲಾಗಿದೆ.

ಅಲ್ಲದೆ, ಸೋಂಕಿತರನ್ನು ವಿಕ್ಟೋರಿಯಾ ಅಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರ ಸಂಪರ್ಕದಲ್ಲಿದ್ದ 10ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ನಿಮ್ಹಾನ್ಸ್ ಆಸ್ಪತ್ರೆಯಲ್ಲಿಯೇ ಒಟ್ಟು 8 ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ. ಇದಕ್ಕೆ ಪರ್ಯಾಯವಾಗಿ ಐಸಿಯು ವಾರ್ಡ್ ನಲ್ಲಿದ್ದ 20 ರೋಗಿಗಳನ್ನ ಪಕ್ಕದ ಬಿಲ್ಡಿಂಗೆ ಶಿಫ್ಟ್ ಮಾಡಲಾಗಿದ್ದು, ಎಂದಿನಂತೆ ಚಿಕಿತ್ಸೆ ನೀಡಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News