×
Ad

ಮಾಜಿ ಶಾಸಕ ಎಚ್‌.ಸಿ ಬಾಲಕೃಷ್ಣ ಪುತ್ರಿಗೆ ಕೊರೋನ ವೈರಸ್‌ ಸೋಂಕು

Update: 2020-06-22 21:22 IST
ಎಚ್‌.ಸಿ ಬಾಲಕೃಷ್ಣ

ಬೆಂಗಳೂರು, ಜೂ.22: ಮಾಗಡಿಯ ಮಾಜಿ ಶಾಸಕ ಎಚ್‌.ಸಿ ಬಾಲಕೃಷ್ಣ ಅವರ ಪುತ್ರಿಗೆ ಕೊರೋನ ವೈರಸ್‌ ಸೋಂಕು ತಗಲಿರುವುದು ದೃಢಪಟ್ಟಿದೆ. 

ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ಆಕೆಗೆ ಸೋಂಕು ತಗಲಿರುವುದಾಗಿ ಸ್ವತಃ ಮಾಜಿ ಶಾಸಕ ಎಚ್‌.ಸಿ ಬಾಲಕೃಷ್ಣ ಅವರು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಅವರು, ‘ನನ್ನ ಪುತ್ರಿ ಕಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೊರೋನ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಮಾಡಿಸಿದಾಗ ವರದಿಯು ಪಾಸಿಟಿವ್‌ ಬಂದಿದೆ. ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಈ ಪ್ರಮುಖ ವಿಷಯವನ್ನು ಎಲ್ಲರ ಗಮನಕ್ಕೆ ತಿಳಿಸಲು ಇಚ್ಛಿಸುತ್ತೇನೆ,’ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News