ಭಟ್ಕಳ : ಮಹಿಳೆ ಆತ್ಮಹತ್ಯೆ

Update: 2020-06-22 17:16 GMT

ಭಟ್ಕಳ: ತಾಲೂಕಿನ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಯಲ್ವಡಿಕವೂರ್ ಪಂಚಯತ್ ನ ಮುಗ್ಲಿಹೊಂಡಾ ದ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

 ವಿದ್ಯಾ ಅಣ್ಣಪ್ಪ ನಾಯ್ಕ(45) ಮೃತರು ಎಂದು ಗುರುತಿಲಾಗಿದೆ. ಪತಿ ಮತ್ತು ಇಬ್ಬರು ಪುತ್ರರನ್ನು ಹೊಂದಿರುವ ಇವರು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News