ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನ ವೈರಸ್ ಸೋಂಕು
ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.
‘ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, ನನ್ನ ಪತ್ನಿ ಹಾಗೂ ಮಗಳಿಗೆ ಕೊರೋನ ಪಾಸಿಟಿವ್ ಬಂದಿದೆ. ಅವರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಪುತ್ರರು ಮತ್ತು ನನಗೆ ಕೊರೋನ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಸೋಮವಾರ ಸುಧಾಕರ್ ಅವರ ತಂದೆಗೂ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಈ ಕುರಿತು ಸಚಿವ ಸುಧಾಕರ್ ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ.
— Dr Sudhakar K (@mla_sudhakar) June 23, 2020