×
Ad

ಬೆಂಗಳೂರು: ಕೊರೋನ ಪಾಸಿಟಿವ್​; ಪೊಲೀಸ್ ಕಾನ್ಸ್ ಸ್ಟೇಬಲ್ ಆತ್ಮಹತ್ಯೆ

Update: 2020-06-23 10:07 IST

ಬೆಂಗಳೂರು: ಕೊರೋನ ವೈರಸ್ ಭೀತಿಯಿಂದ ಕೆಎಸ್​ಆರ್​​ಪಿ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾದ 50 ವರ್ಷದ ಪೊಲೀಸ್​ ಹೆಡ್​​ ಕಾನ್​ಸ್ಟೇಬಲ್​​ಗೆ ಕೊರೋನ ಪಾಸಿಟಿವ್​ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕೆಎಸ್​ಆರ್​​ಪಿ ಬಸ್​​ನಲ್ಲಿಯೇ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಬಸ್​ನಲ್ಲೇ ಪೊಲೀಸ್ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News