ಕಡಬ: ರಸ್ತೆ ಅಪಘಾತ; ಗಾಯಾಳು ಬೈಕ್ ಸವಾರ ಮೃತ್ಯು
Update: 2020-06-23 10:58 IST
ಕಡಬ, ಜೂ.23. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸುಬ್ರಹ್ಮಣ್ಯ - ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ ಕೋಡಂದೂರು ಎಂಬಲ್ಲಿ ಸೋಮವಾರ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ರೈ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳು ಪ್ರಮೋದ್ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.