ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ, ಸಿಆರ್‌ಪಿಎಫ್ ಯೋಧ ಬಲಿ

Update: 2020-06-23 06:36 GMT

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಆರ್‌ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಉಗ್ರರು ಹತರಾಗಿದ್ದಾರೆ.

ಗ್ರಾಮದಲ್ಲಿ ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳವಾರ ನಸುಕಿನಲ್ಲಿ ಪುಲ್ವಾಮಾ ಜಿಲ್ಲೆಯ ಬಂಡೂರ್ ಪ್ರದೇಶದಲ್ಲಿ ಸೇನೆ ಕಾರ್ಯಾಚರಣೆ ನಡೆಸಿದ ವೇಳೆ ಗುಂಡಿನ ಚಕಮಕಿ ಆರಂಭವಾಯಿತು.

ಉಗ್ರರ ದಾಳಿಗೆ ಸಿಆರ್‌ಪಿಎಫ್ ಯೋಧರೊಬ್ಬರು ತೀವ್ರವಾಗಿ ಗಾಯಗೊಂಡು ಬಳಿಕ ಮೃತಪಟ್ಟಿದ್ದಾರೆ. ಎನ್‌ಕೌಂಟರ್‌ನಲ್ಲಿ ಇಬ್ಬರು ಅಥವಾ ಮೂವರು ಉಗ್ರರು ಸಿಕ್ಕಿಹಾಕೊಂಡಿದ್ದಾರೆ ಎನ್ನಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಎನ್‌ಕೌಂಟರ್ ಸ್ಥಳದಿಂದ ಎರಡು ಎಕೆ-47 ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.

ಅನಂತ್‌ನಾಗ್ ಜಿಲ್ಲೆಯ ವೆರಿನಾಗ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುವ ವೇಳೆ ಸೋಮವಾರ ಉಗ್ರರ ಒಂದು ಗುಂಪು ತಪ್ಪಿಸಿಕೊಂಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News