ಕರ್ಕಿ ನಾರಾಯಣ ಹಾಸ್ಯಗಾರ

Update: 2020-06-23 12:43 GMT

ಉಡುಪಿ, ಜೂ.23: ಬಡಗುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ ಕರ್ಕಿ ನಾರಾಯಣ ಹಾಸ್ಯಗಾರ ವಯೋಸಹಜವಾಗಿ ಸೋಮವಾರ ಉತ್ತರ ಕನ್ನಡ ಜಿಲ್ಲೆ ಕರ್ಕಿಯ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಕರ್ಕಿ ದುರ್ಗಾಂಬ ಯಕ್ಷಗಾನ ಮೇಳದ ಪ್ರಸಿದ್ಧ ಕಲಾದರಾಗಿದ್ದ ಕರ್ಕಿ ಪರಮಯ್ಯ ಹಾಸ್ಯಗಾರರ ಪುತ್ರರಾಗಿದ್ದ ಇವರು, ಪೂರ್ಣ ಕಾಲಿಕ ಯಕ್ಷಗಾನ ಕಲಾದರಾಗಿದ್ದರು. ಸುಮಾರು ಏಳು ದಶಕಗಳ ಕಾಲ ಕಲಾ ಸೇವೆಗೈದ ಇವರು ತೆಂಕುತಿಟ್ಟಿನ ಸುರತ್ಕಲ್ ಮೇಳದಲ್ಲಿಯೂ ತಿರುಗಾಟ ಮಾಡಿದ್ದರು. ಅವರ ಕೃಷ್ಣ, ಸುಧನ್ವ ಮೊದಲಾದ ಪಾತ್ರಗಳು ಕಲಾಪ್ರೇಮಿಗಳ ಮೆಚ್ಚುಗೆ ಗಳಿಸಿದ್ದವು. ತಮ್ಮ ಲಾಲಿತ್ಯಪೂರ್ಣ ನೃತ್ಯಾಭಿನಯದಿಂದ ಕರ್ಕಿ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದರು.

ಕರ್ನಾಟಕ ಯಕ್ಷಗಾನ ಅಕಾಡೆಮಿ, ಉಡುಪಿಯ ಯಕ್ಷಗಾನ ಕಲಾರಂಗದ ಪ್ರಶಸ್ತಿಯೂ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿ ದ್ದರು. ಇವರು ಪತ್ನಿ, ಪುತ್ರ, ಪುತ್ರಿ ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ