ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಲು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

Update: 2020-06-23 13:59 GMT

ಬೆಂಗಳೂರು, ಜೂ. 23: ಕೊರೋನ ಸೋಂಕು ತಡೆಗಟ್ಟಲು ಹೇರಿದ್ದ ಲಾಕ್‍ಡೌನ್‍ನಿಂದ ರಾಜ್ಯದಲ್ಲಿನ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸರಕಾರ ಕೂಡಲೇ ಈ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಕೋರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

2019ರ ಡಿಸೆಂಬರ್ ನಲ್ಲಿ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 15 ಸಾವಿರ ರೂ.ನಿಂದ 17 ಸಾವಿರ ರೂ.ಗಳ ವರೆಗೆ ಇತ್ತು. ಇದೀಗ ಅದರ ಬೆಲೆ ಗಣನೀಯ ಪ್ರಮಾಣದಲ್ಲಿ ಕುಸಿದಿದೆ. 8,700 ರೂ.ನಿಂದ 9,500 ರೂ.ಗಳಿಗೆ ಇಳಿಕೆಯಾಗಿದೆ. ಈ ಮಧ್ಯೆ ಕೇಂದ್ರ ಸರಕಾರ ಕೊಬ್ಬರಿ ಕ್ವಿಂಟಾಲ್‍ಗೆ 10,300 ರೂ.ನಿಗದಿ ಮಾಡಿದ್ದು, ಇದು ಉತ್ಪಾದನಾ ವೆಚ್ಚಕ್ಕಿಂತ ಕಡಿಮೆಯಾಗಿದೆ.

ಹೀಗಾಗಿ ಕೇಂದ್ರ ಸರಕಾರ ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆ 12 ಸಾವಿರ ರೂ.ಗಳನ್ನು ನಿಗದಿ ಮಾಡಬೇಕು. ಹೆಚ್ಚುವರಿಯಾಗಿ ಪ್ರತಿ ಕ್ವಿಂಟಾಲ್‍ಗೆ 4 ಸಾವಿರ ರೂ.ನಂತೆ ರೈತರಿಗೆ ನೀಡುವ ಮೂಲಕ ಸಂಕಷ್ಟಕ್ಕೆ ಸಿಲುಕಿರುವ ಕೊಬ್ಬರಿ ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಸ್ಪಂದಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News