ಲಾಕ್‍ಡೌನ್ ಉಲ್ಲಂಘಿಸುವ ಜನಪ್ರತಿನಿಧಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ: ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2020-06-23 15:20 GMT

ಬೆಂಗಳೂರು, ಜೂ.23: ಸುರಕ್ಷಿತ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಲಾಕ್‍ಡೌನ್ ಜಾರಿಯ ನಿಯಮ ಉಲ್ಲಂಘಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಲಾಕ್‍ಡೌನ್ ನಿಯಮ ಉಲ್ಲಂಘಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡುವ ಜನಪ್ರತಿನಿಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ ನ್ಯಾಯಪೀಠವು ಸಾರ್ವಜನಿಕರು ವಾಟ್ಸ್ ಆ್ಯಪ್, ದೂರವಾಣಿ ಕರೆ, ಎಸ್ಎಂಎಸ್ ಮೂಲಕ ದೂರು ನೀಡಲು ಕುಂದು ಕೊರತೆ ಪರಿಹಾರ ಕಾರ್ಯ ತಂತ್ರವನ್ನು ರೂಪಿಸುವಂತೆ ಸರಕಾರಕ್ಕೆ ಆದೇಶಿಸಿತು.

ಒಂದು ವಾರದೊಳಗೆ ಕುಂದು ಕೊರತೆ ಪರಿಹಾರ ರೂಪಿಸಬೇಕು. ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಪೊಲೀಸರು ಸಾರ್ವಜನಿಕರು ನೀಡಿದ ದೂರನ್ನು ದಾಖಲಿಸಬೇಕು. ಅಲ್ಲಿ ದಾಖಲಾಗುವ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಪೀಠ ಸೂಚಿಸಿತು. ಅಷ್ಟೇ ಅಲ್ಲದೇ ಈ ಆದೇಶ ಪಾಲನೆ ಬಗ್ಗೆ ಎರಡು ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಸರಕಾರಕ್ಕೆ ನ್ಯಾಯಪೀಠವು ಸೂಚನೆ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News