ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೋವಿಡ್-19 ಸುರಕ್ಷಿತ ಕೈಪಿಡಿ ಪ್ರಕಟಿಸಿದ ಶಿಕ್ಷಣ ಇಲಾಖೆ

Update: 2020-06-23 15:42 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.23: ಕೋವಿಡ್-19 ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನು ಸುರಕ್ಷಿತವಾಗಿ ಬರೆಯುವುದಕ್ಕಾಗಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಮಾರ್ಗಸೂಚಿಗಳನ್ನು ಒಳಗೊಂಡ ಕೈಪಿಡಿಯನ್ನು ಪ್ರಕಟಿಸಿದೆ.

ಪ್ರತಿ ವಿದ್ಯಾರ್ಥಿಯು ಆರೋಗ್ಯ ತಪಾಸಣೆಗೆ ಒಳಪಡಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುನ್ನ ತಲುಪಬೇಕು. ಹಾಗೂ ತಪಾಸಣೆಗೆ ಮುನ್ನ ನಿಮ್ಮ ಕೈಗಳನ್ನು ಸ್ಯಾನಿಟೈಸರ್ ನಿಂದ ಸ್ವಚ್ಛ ಮಾಡಿರಬೇಕು. ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪ್ರತಿ ವಿದ್ಯಾರ್ಥಿಯಿಂದಲೂ ಒಂದು ಮೀಟರ್ ಅಂತರ ಕಾಯ್ದುಕೊಳ್ಳಬೇಕು.

ಕೆಮ್ಮುವಾಗ, ಸೀನುವಾಗ ಮೂಗು ಮತ್ತು ಬಾಯಿಗೆ ಕರವಸ್ತ್ರವನ್ನು ಉಪಯೋಗಿಸಬೇಕು. ಇತರೆ ವಿದ್ಯಾರ್ಥಿಗಳೊಂದಿಗೆ ಕೈಕುಲುಕುವುದು, ಅಪ್ಪಿಕೊಳ್ಳುವುದು ಮಾಡಬಾರದು. ಕೊಠಡಿಯ ಯಾವುದೇ ಜಾಗವನ್ನು ಅನಗತ್ಯವಾಗಿ ಮುಟ್ಟದಂತೆ ಜಾಗ್ರತೆ ವಹಿಸಬೇಕು. ಹಾಗೂ ಪ್ರತಿ ವಿದ್ಯಾರ್ಥಿಯು ತಮ್ಮದೇ ಆದ ನೀರಿನ ಬಾಟಲ್ ಹಾಗೂ ಆಹಾರದ ಡಬ್ಬ ತರುವುದು ಉತ್ತಮವೆಂಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News