ಪದ್ಮಶ್ರೀ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಜೂ.23: ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ 2021ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’, ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ದಿನದ ಹಿಂದಿನ ದಿನಾಂಕದಂದು ಕೇಂದ್ರ ಸರಕಾರದಿಂದ ಪ್ರಕಟಿಸಲಾಗುತ್ತದೆ. ಅರ್ಹರು ಅರ್ಜಿ ಸಲ್ಲಿಸಬಹುದು.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಅತ್ಯುತ್ತಮ ಗುಣಮಟ್ಟ ಹೊಂದಿರಬೇಕು. ಅಲ್ಲದೆ, ಆ ವ್ಯಕ್ತಿಯು ಜೀವನ ಪರ್ಯಂತ ಸಾಧಿಸಿರುವ ಪ್ರಗತಿ ಹಾಗೂ ಅವರು ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಅರ್ಹ ಅರ್ಜಿದಾರರು ನಿಗದಿತ ನಮೂನೆಯನ್ನು ಕಚೇರಿಯಿಂದ ಪಡೆದು ವೈಯಕ್ತಿಕ ವಿವರಗಳನ್ನು ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಬೇಕು. ಗರಿಷ್ಠ ಎರಡು ಪುಟಗಳೊಳಗಿನ ಅವರ ಸಾಧನೆಗಳ ಕುರಿತಾದ ವಿವರವನ್ನು ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಪ್ರತ್ಯೇಕವಾಗಿ ಲಗತ್ತಿಸಿ ಜೂ.25ರ ಒಳಗೆ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲೆ, ಮಂಗಳೂರು ಇವರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳ ಕ್ರೀಡಾಂಗಣ, ಇ-ಮೇಲ್ adyssdk@yahoo.com, ದೂ.ಸಂ.: 0824- 2451264ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.