×
Ad

ಕೊಲೆ ಯತ್ನ ಆರೋಪಿಗೆ ಕೊರೋನ: 20 ಪೊಲೀಸರು ಕ್ವಾರಂಟೈನ್

Update: 2020-06-23 23:56 IST

ಬೆಂಗಳೂರು, ಜೂ.23: ಕೊಲೆ ಯತ್ನ ಆರೋಪಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇಲ್ಲಿನ ಡಿಜೆಹಳ್ಳಿ ಠಾಣಾ ಪೊಲೀಸರಲ್ಲಿ ಆತಂಕ ಮನೆ ಮಾಡಿದೆ.

ಆರೋಪಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ಸೋಂಕು ತಗುಲಿರುವುದು ದೃಢವಾಗಿದೆ. ಇದರಿಂದ ಆರೋಪಿಯನ್ನು ತನಿಖೆ ಮಾಡಿದ್ದ 20 ಮಂದಿ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸ್ ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್‍ಡೌನ್ ಮಾಡಿ ಸ್ಯಾನಿಟೈಸ್ ಮಾಡಿದ್ದು, ಸದ್ಯ ಸಾರ್ವಜನಿಕರ ಪ್ರವೇಶಕ್ಕೆ ನಿಬರ್ಂಧ ಹೇರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News