ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2020-06-24 12:47 GMT

ಬೆಂಗಳೂರು, ಜೂ. 24: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯಸಾಹಸ ಪ್ರದರ್ಶಿಸಿದ ಬಾಲಕರಿಗೆ 'ಹೊಯ್ಸಳ' ಮತ್ತು ಬಾಲಕಿಯರಿಗೆ 'ಕೆಳದಿ ಚೆನ್ನಮ್ಮ' ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳು ಧೈರ್ಯಸಾಹಸ ಪ್ರದರ್ಶಿಸಿದ ಪ್ರಕರಣಗಳು ಆಗಸ್ಟ್ 2019ರಿಂದ ಜುಲೈ 2020ರೊಳಗೆ ನಡೆದಿರಬೇಕು. 2002ರ ಆಗಸ್ಟ್ 1 ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10 ಸಾವಿರ ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುವುದು.

2020ನೆ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ:ಎಂ.ಹೆಚ್.ಮರಿಗೌಡ ರಸ್ತೆ, ಬೆಂಗಳೂರು-560029 ಇವರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಭರ್ತಿಮಾಡಿ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News