ಪೆಟ್ರೋಲ್, ಡೀಸೆಲ್ ದರ ಹೆಚ್ಚಳ: ಕೇಂದ್ರದ ವಿರುದ್ಧ ಎಐಟಿಯುಸಿ, ಸಿಐಟಿಯು ಪ್ರತಿಭಟನೆ

Update: 2020-06-24 13:15 GMT

ಹುಬ್ಬಳ್ಳಿ, ಜೂ.24: ಕೊರೋನ ವೈರಸ್ ಸೋಂಕು ಭೀತಿ ಹಾಗೂ ಉದ್ಯೋಗ ಕಡಿತದ ಮಧ್ಯೆಯೂ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಹುಬ್ಬಳ್ಳಿ ನಗರದಲ್ಲಿ ಎಐಟಿಯುಸಿ ಮತ್ತು ಸಿಐಟಿಯು ಸಂಘಟನೆ ವತಿಯಿಂದ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ನಗರದಲ್ಲಿ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ದೇಶಾದ್ಯಂತ ಕೊರೋನ ಮಹಾಮಾರಿಯಿಂದ ಜನ ತತ್ತರಿಸಿ ಹೋಗಿದ್ದು, ಲಾಕ್‍ಡೌನ್ ಜಾರಿಯಿಂದಾಗಿ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನಸಾಮಾನ್ಯರ ಬದುಕು ದುಸ್ತರವಾಗಿದ್ದು, ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರ ಪೆಟ್ರೋಲಿಯಂ ಕಂಪೆನಿಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದೇ ದಿನನಿತ್ಯ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಏರಿಕೆ ಮಾಡುತ್ತಲೆ ಇದೆ. ಇದರಿಂದ, ನೇರವಾಗಿ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಾಮಾನ್ಯ ಜನರಿಗೆ ಕೈಗೆಟುಕುವ ದರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿಗದಿ ಮಾಡಬೇಕೆಂದು ತಹಶೀಲ್ದಾರರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News