×
Ad

ಖಾಸಗಿ ಆಸ್ಪತ್ರೆಗಳಲ್ಲಿ ಫಿವರ್ ಕ್ಲಿನಿಕ್, ಗಂಟಲು ದ್ರವ ಪರೀಕ್ಷೆಗೆ ರಾಜ್ಯ ಸರಕಾರ ಅವಕಾಶ

Update: 2020-06-24 21:00 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ. 24: ಮಾರಕ ಕೊರೋನ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ದರ ನಿಗದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ರಾಜ್ಯ ಸರಕಾರ ಇದೀಗ, ಫಿವರ್ ಕ್ಲಿನಿಕ್ ಗಳನ್ನು ತೆರೆಯಲು ಮತ್ತು ಸೋಂಕು ಶಂಕಿತರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಹಾಗೂ ವೈದ್ಯಕೀಯ ಕಾಲೇಜುಗಳಿಗೆ ಅವಕಾಶ ಕಲ್ಪಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಪ್ರತಿಯೊಬ್ಬರ ಗಂಟಲು ದ್ರವ ಪರೀಕ್ಷೆಗೆ 350 ರೂಪಾಯಿ ದರ ನಿಗದಿಪಡಿಸಲಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಾರಕ ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿ ವಾರ್ಡ್ ನಲ್ಲಿಯೂ 600 ಫೀವರ್ ಕ್ಲಿನಿಕ್ ತೆರೆಯಲು ಅನುಮತಿ ನೀಡಿದ್ದರು. ಆದರೆ, ಮೂಲ ಸೌಲಭ್ಯಗಳ ಕೊರತೆ ಹಾಗೂ ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ. ಹೀಗಾಗಿ ಸರಕಾರ ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಫೀವರ್ ಕ್ಲಿನಿಕ್ ಆರಂಭಿಸಿ, ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ.

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಸರಕಾರ ಕೋವಿಡ್ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಿದೆ. ಬೆಂಗಳೂರು ನಗರದ ಕಿಮ್ಸ್, ಬಿಜಿಎಸ್ ಗ್ಲೋಬಲ್ ಆಸ್ಪತ್ರೆ, ಸೈಂಟ್ ಜಾನ್ಸ್, ಎಂ.ಎಸ್.ರಾಮಯ್ಯ ಸೇರಿದಂತೆ 66 ಆಸ್ಪತ್ರೆಗಳಲ್ಲಿ ಈ ಸೌಲಭ್ಯ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News