×
Ad

ಬ್ರಹ್ಮಗಿರಿ ವೃತ್ತದ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

Update: 2020-06-24 21:56 IST

ಉಡುಪಿ, ಜೂ.25: ಉಡುಪಿ ನಗರದ ಬ್ರಹ್ಮಗಿರಿ ವೃತ್ತದಲ್ಲಿ ಆದರ್ಶ ಕಟ್ಟಡದ ಎದುರು ಏಕ ಸಾಲಿನಲ್ಲಿ ದ್ವಿಚಕ್ರ ವಾಹನವನ್ನು ಹೊರತುಪಡಿಸಿ ಉಳಿದ ವಾಹನಗಳಿಗೆ ವಾಹನ ನಿಲುಗಡೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

ಬ್ರಹ್ಮಗಿರಿ ವೃತ್ತದಲ್ಲಿ ಐದು ರಸ್ತೆಗಳು ಒಂದಾಗುತ್ತಿದ್ದು, ಇಲ್ಲಿನ ವಿವಿಧ ರಸ್ತೆ ಗಳ ಬದಿಯಲ್ಲಿ ವಾಹನ ಪಾರ್ಕಿಂಗ್ ಮಾಡುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿ ಅಪಘಾತಗಳು ಜಾಸ್ತಿಯಾಗುತ್ತಿವೆ. ಈ ಬಗ್ಗೆ ಉಡುಪಿ ಪೊಲೀಸ್ ಅಧೀಕ್ಷಕರು ಹಾಗೂ ನಗರಸಭೆ ಪೌರಾಯುಕ್ತರು ಜಿಲ್ಲಾ ಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.

ಆ ವರದಿಯನ್ನು ಅನುಸರಿಸಿ ಬ್ರಹ್ಮಗಿರಿ ವೃತ್ತದಲಿ ವಾಹನಗಳ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡು ನಿಟ್ಟಿನಲ್ಲಿ ಬ್ರಹ್ಮಗಿರಿ ವೃತ್ತದ ಆದರ್ಶ ಕಟ್ಟಡದ ಎದುರು ಏಕಸಾಲಿ ನಲ್ಲಿ ದ್ವಿಚಕ್ರ ವಾಹನವನ್ನು ಮಾತ್ರ ನಿಲುಗಡೆ ಮಾಡುವಂತೆ ಮತ್ತು ಇತರೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News