×
Ad

ಕೋವಿಡ್ 19ಗೆ ಆಯುರ್ವೇದ ಚಿಕಿತ್ಸೆಯ ಬಗ್ಗೆ ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚೆ: ಸಚಿವ ಶ್ರೀರಾಮುಲು

Update: 2020-06-24 21:58 IST

ಬೆಂಗಳೂರು, ಜೂ. 24: ಆಯುರ್ವೇದ ವೈದ್ಯ ಡಾ.ಗಿರಿಧರ್ ಕಜೆ ಅವರು, ಕೊರೋನ ಸೋಂಕಿನ ಚಿಕಿತ್ಸೆಗೆ ಆಯುರ್ವೇದ ಔಷಧ ನೀಡುವ ಬಗ್ಗೆ ಸಲಹೆ ನೀಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಬುಧವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೊರೋನ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ ನೀಡುವ ಬಗ್ಗೆ ಚರ್ಚಿಸಿದ್ದು, ಸೋಮವಾರ(ಜೂ.29) ನಡೆಯಲಿರುವ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ಕುರಿತು ಚರ್ಚಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News