ಮುಂದಿನ ಐದು ದಿನ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

Update: 2020-06-24 18:02 GMT

ಬೆಂಗಳೂರು, ಜೂ.24: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಜೂನ್ 1ರಿಂದ ಇಲ್ಲಿಯವರೆಗೆ ವಾಡಿಕೆಯಂತೆ ಸರಾಸರಿ ಮಳೆಯಾಗಿದೆ. ದಕ್ಷಿಣ ಕನ್ನಡ, ಗದಗ, ಚಿಕ್ಕಬಳ್ಳಾಪುರ, ಬೆಂಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವಾರಕ್ಕೆ ಹೋಲಿಸಿದರೆ ಗಾಳಿಯ ದಿಕ್ಕು ಬದಲಾವಣೆಯಾಗಿದೆ. ಹೀಗಾಗಿ ಮುಂದಿನ ಐದು ದಿನ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News