ಭಯ ಬಿಟ್ಟು ಧೈರ್ಯ-ವಿಶ್ವಾಸದಿಂದ ಪರೀಕ್ಷೆ ಕೇಂದ್ರಕ್ಕೆ ಮಕ್ಕಳನ್ನು ಕಳುಹಿಸಿ: ನಳಿನ್ ಕುಮಾರ್ ಕಟೀಲು

Update: 2020-06-24 18:30 GMT

ಬೆಂಗಳೂರು, ಜೂ. 24: ಕೊರೋನ ವೈರಸ್ ಸೋಂಕಿನ ಭಯ ಬಿಟ್ಟು ಧೈರ್ಯ ಮತ್ತು ವಿಶ್ವಾಸದಿಂದ ಮಕ್ಕಳನ್ನು ನಾಳೆಯಿಂದ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರಕಾರ ಶಿಕ್ಷಣ ಇಲಾಖೆಯೊಂದಿಗೆ ಆರೋಗ್ಯ, ಸಾರಿಗೆ ಮತ್ತು ಗೃಹ ಇಲಾಖೆ ಕೈಜೋಡಿಸಿದ್ದು, ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಯಶಸ್ವಿಯಾಗಿ ಪರೀಕ್ಷೆ ನಡೆಸಲು ಸರಕಾರ ಸೂಕ್ತ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ಎಸೆಸೆಲ್ಸಿ ಪರೀಕ್ಷೆ ಯಾವುದೇ ಆತಂಕವಿಲ್ಲದಎ ಬರೆಯಬೇಕು ರಾಜ್ಯಾದ್ಯಂತ ಪ್ರವಾಸ ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರೀಕ್ಷಾ ಪೂರ್ವ ತಯಾರಿಯನ್ನು ಖುದ್ದು ಪರಿಶೀಲನೆ ನಡೆಸಿದ್ದಾರೆ. ಪರೀಕ್ಷೆ ಬರೆಯುವ ಮೊದಲು ಆರೋಗ್ಯ ತಪಾಸಣೆ, ಮಾಸ್ಕ್ ವಿತರಣೆ, ಸಮಪರ್ಕ ಸ್ಯಾನಿಟೈಸರ್, ಅಗತ್ಯ ವೈದ್ಯಕೀಯ ಸೌಲಭ್ಯ ದೊರೆಯುವುದು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News