ಸಿಇಟಿ ಪರೀಕ್ಷಾ ಕೇಂದ್ರ ಬದಲಾಯಿಸಿಕೊಳ್ಳಲು ಜೂ.29ರವರೆಗೆ ಅವಕಾಶ

Update: 2020-06-25 17:13 GMT

ಬೆಂಗಳೂರು, ಜೂ.25: ಕೋವಿಡ್-19 ಹಿನ್ನೆಲೆಯಲ್ಲಿ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಹಾಗೂ ಸಿಇಟಿ-2020ರ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಳ್ಳಲು ಜೂ.26ರ ಬೆಳಗ್ಗೆ 11ರಿಂದ 29ರ ಸಂಜೆ 6ರವರೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ಬೆಂಗಳೂರು ಕೇಂದ್ರದಲ್ಲಿ ಮಾತ್ರ ಸಿಇಟಿ ಮತ್ತು ಕನ್ನಡ ಭಾಷೆ ಪರೀಕ್ಷೆಯನ್ನು ನಡೆಸುವುದಾಗಿ ಪ್ರಕಟಿಸಲಾಗಿತ್ತು. ಆದರೆ, ಕೋವಿಡ್-19ರ ಪರಿಸ್ಥಿತಿಯಿಂದ ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರದಲ್ಲಿಯೂ ಕನ್ನಡ ಭಾಷೆ ಪರೀಕ್ಷೆಯನ್ನು ನಡೆಸಲಾಗುವುದು. ಆದ್ದರಿಂದ ಹೊರನಾಡು ಮತ್ತು ಗಡಿನಾಡ ಕನ್ನಡಿಗ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಈ ಮೇಲಿನ ಯಾವುದಾದರು ಒಂದು ಕೇಂದ್ರದಲ್ಲಿ ಹಾಜರಾಗಬಹುದು.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಹಾಗೂ ತಾವು ಆನ್‍ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ವಿವರಗಳನ್ನು ಅರ್ಹತೆಗೆ ಅನುಗುಣವಾಗಿ ಅಗತ್ಯವಿದ್ದಲ್ಲಿ ಮಾರ್ಪಡಿಸಿಕೊಳ್ಳಲು ಇದು ಅಂತಿಮ ಅವಕಾಶವಾಗಿದೆ. ಹಾಗೂ ಅಭ್ಯರ್ಥಿಗಳ ಮನವಿ ಮೇರೆಗೆ ರಬಕವಿ ಬನಹಟ್ಟಿ ತಾಲೂಕಿನಲ್ಲಿಯೂ ಸಿಇಟಿ 2020 ಪರೀಕ್ಷಾ ಕೇಂದ್ರವನ್ನು ತೆರೆದಿರುವುದರಿಂದ ಇಚ್ಛೆಯುಳ್ಳ ಅಭ್ಯರ್ಥಿಗಳು ಈ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ., ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ಗೆಭೇಟಿ ನೀಡಬಹುದೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News