ಜುಲೈ 15ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅವಕಾಶವಿಲ್ಲ

Update: 2020-06-26 15:56 GMT

ಹೊಸದಿಲ್ಲಿ: ಭಾರತಕ್ಕೆ ಆಗಮಿಸುವ ಮತ್ತು ಭಾರತದಿಂದ ತೆರಳುವ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಜುಲೈ 15ರವರೆಗೆ ಅಮಾನತುಗೊಳಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಅಗತ್ಯದ ಸಂದರ್ಭದಲ್ಲಿ ಕೆಲವು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧದಿಂದ ವಿನಾಯಿತಿ ದೊರಕಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸ್ಪಷ್ಟಪಡಿಸಿದೆ. ಈ ನಿರ್ಬಂಧ ಸರಕು ಸಾಗಿಸುವ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಇಲಾಖೆ ತಿಳಿಸಿದೆ.

ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಅಂತರಾಷ್ಟ್ರೀಯ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ದೇಶೀಯ ವಿಮಾನಗಳ ಹಾರಾಟವನ್ನು ಮೇ 25ರಿಂದ ಹಂತಹಂತವಾಗಿ ಆರಂಭಿಸಲಾಗಿದೆ. ಅಲ್ಲದೆ ದೇಶದೊಳಗೆ ಮತ್ತು ವಿದೇಶದಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಕರೆತರುವ ಉದ್ದೇಶದಿಂದ ‘ವಂದೇ ಭಾರತ್ ಮಿಷನ್’ ಎಂಬ ಕಾರ್ಯಕ್ರಮದಡಿ ವಿಮಾನ ಸಂಚಾರಕ್ಕೆ ಅವಕಾಶ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News