×
Ad

ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಬೀಗ, ಪ್ರಕರಣ ದಾಖಲು

Update: 2020-06-26 19:02 IST

ಬೆಂಗಳೂರು, ಜೂ.26; ಕೊರೋನ ಸೋಂಕು ನಿಂಯತ್ರಣಕ್ಕಾಗಿ ರೂಪಿಸಿರುವ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ನಗರದ ಮಲ್ಲೇಶ್ವರಂನ 8ನೇ ಕ್ರಾಸ್‍ನಲ್ಲಿರುವ ಅಂಗಡಿಗಳಿಗೆ ಬೀಗ ಹಾಕಲಾಗಿದೆ.

ಡಿಸಿಪಿ ಶಶಿಕುಮಾರ್ ನೇತೃತ್ವದಲ್ಲಿ ಬೆಂಗಳೂರು ಉತ್ತರ ವಿಭಾಗದ ಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಅಂಗಡಿಗಳ ಮೇಲೆ ದಾಳಿ ಮಾಡಿ, ಒಟ್ಟು ಐದು ಅಂಗಡಿಗೆ ಬೀಗ ಹಾಕಿಸಿ ಪ್ರಕರಣ ದಾಖಲು ಮಾಡಿದ್ದಾರೆ.

ಕೊರೋನ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳು ನಿಯಮ ಪಾಲನೆ ಮಾಡಬೇಕು. ನಿಯಮ ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಅಂಗಡಿ ಮಾಲಕರು, ಮಾಸ್ಕ್, ಸ್ಯಾನಿಟೈಸರ್ ಮತ್ತು ಸುರಕ್ಷಿತ ಅಂತರವನ್ನು ಪಾಲಿಸುತ್ತಿರಲ್ಲಿಲ್ಲ. ಆದ್ದರಿಂದ ಅಂಗಡಿಗಳಿಗೆ ಬೀಗ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News