×
Ad

ಸುರತ್ಕಲ್: ಮಾಜಿ ಶಾಸಕರ ಮನೆ ಸೀಲ್‌ಡೌನ್‌

Update: 2020-06-26 19:56 IST

ಮಂಗಳೂರು, ಜೂ. 26: ನಗರದ ಹೊರವಲಯದ ಸುರತ್ಕಲ್ ವ್ಯಾಪ್ತಿಯಲ್ಲಿನ ಮಾಜಿ ಶಾಸಕರ ಪುತ್ರನಲ್ಲಿ ಕೊರೋನ ಸೋಂಕು ಕಂಡುಬಂದಿದ್ದು, ಅವರ ಮನೆಯನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಶಾಸಕರ ಪುತ್ರನು ಈ ಮೊದಲು ಬೆಂಗಳೂರಿನಲ್ಲಿದ್ದರು. ಅವರ ಗಂಟಲಿನ ದ್ರವದ ಪರೀಕ್ಷಾ ವರದಿಯಲ್ಲಿ ಸೋಂಕು ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ವೆನ್ಲಾಕ್ ಕೊವೀಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮನೆಯ ಇತರ ಸದಸ್ಯರ ವರದಿ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದ್ದು, ಮನೆಯನ್ನು ಸಾರ್ವಜನಿಕರ ಭೇಟಿಗೆ ಬಂದ್ ಮಾಡಲಾಗಿದೆ. ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News