×
Ad

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸೀಲ್‍ಡೌನ್

Update: 2020-06-26 20:34 IST

ಬೆಂಗಳೂರು, ಜೂ.26: ನಗರದಲ್ಲಿ ಕೊರೋನ ಪೀಡಿತ ಪೊಲೀಸರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶುಕ್ರವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಕೊರೋನ ಸೊಂಕು ತಗಲಿರುವುದು ಬೆಳಕಿಗೆ ಬರುತ್ತಿದ್ದಂತೆಯೇ, ಮುಂಜಾಗ್ರತಾ ಕ್ರಮವಾಗಿ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ.

ನಾಳೆಯಿಂದ (ಜೂ.27) ಮೂರು ದಿನಗಳ ಕಾಲ ಕಚೇರಿಯನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರ ಆವರಣದಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿ ಮನೆಯಿಂದ ಅಥವಾ ಉಪ ವಿಭಾಗದ ಕಚೇರಿಯಿಂದ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ.

ಈ ಅವಧಿಯಲ್ಲಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ನಗರ ನಿಯಂತ್ರಣ ಕೋಣೆಯಲ್ಲಿ ನಿಯಮಿತ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಇದನ್ನು ಹೊರತುಪಡಿಸಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಯಾವುದೇ ಕೆಲಸ ನಿರ್ವಹಿಸುವುದಿಲ್ಲ ಎಂದು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News