ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರಾಘವೇಂದ್ರ ಕಿಣಿ ನೇಮಕ
Update: 2020-06-26 21:18 IST
ಉಡುಪಿ, ಜೂ.26: ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಕೆ. ರಾಘವೇಂದ್ರ ಕಿಣಿ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ನೇಮಿಸಿ ಆದೇಶ ಹೊಡಿಸಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸುಮಾ ನಾಯ್ಕ, ದಿನಕರ ಪೂಜಾರಿ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು ಹಾಗೂ ಕಿಶೋರ್ ಕುಮಾರ್ ಅವರನ್ನು ನೇಮಿಸಲಾಗಿದೆ. ನೂತನ ಅಧ್ಯಕ್ಷರಿಗೆ ಹಾಗೂ ಸದಸ್ಯರುಗಳಿಗೆ ಶಾಸಕ ಕೆ. ರಘುಪತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ.