ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿಗೆ ಕೊರೋನ

Update: 2020-06-26 16:26 GMT

ಹೊಸದಿಲ್ಲಿ,ಜೂ.25: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ವಕ್ತಾರ ಅಭಿಷೇಕ್ ಸಿಂಘ್ವಿ ಅವರಿಗೆ ಶುಕ್ರವಾರ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಮನೆಯಲ್ಲಿ ಕ್ವಾರಂಟೈನ್‌ಗೊಳಗಾಗಿದ್ದಾರೆ.

ಸಿಂಘ್ವಿ ಅವರು ಜ್ವರದಂತಹ ಲಘುವಾದ ಕೋವಿಡ್-19 ಲಕ್ಷಣಗಳನ್ನು ಹೊಂದಿದ್ದಾರೆ. ಅವರ ಪತ್ನಿಗೂ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಅವರು ಕೂಡಾ ಸರಕಾರದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಮನೆಯಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.

 ಸಿಂಘ್ವಿ ಅವರಿಗೆ ಕೊರೋನ ಸೋಂಕು ದೃಢಪಟ್ಟ ಬಳಿಕ ಅವರ ಪುತ್ರ ಹಾಗೂ ಕುಟುಂಬದ ಇತರ ಸದಸ್ಯರು, ಸಿಬ್ಬಂದಿಯನ್ನು ಕೂಡಾ ವೈರಸ್ ಪರೀಕ್ಷೆಗೊಳಪಡಿಸಲಾಗಿತ್ತು.

  ಅಭಿಷೇಕ್ ಸಿಂಘ್ವಿ ಅವರು ಕೋವಿಡ್-19 ಸೋಂಕಿತರಾದ ಕಾಂಗ್ರೆಸ್ ಎರಡನೆ ನಾಯಕರಾಗಿದ್ದಾರೆ. ಇದಕ್ಕೂ ಮುನ್ನ ಕಾಂಗ್ರೆಸ್ ಪಕ್ಷದ ಮಾಜಿ ವಕ್ತಾರ ಸಂಜಯ್ ಝಾ ಅವರಿಗೆ ಕೊರೋನ ಸೋಂಕು ತಗಲಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News