ಬಿಜೆಪಿ ಸರಕಾರ ರಚನೆಯಲ್ಲಿ ರೋಷನ್ ಬೇಗ್ ಪ್ರಮುಖ ಪಾತ್ರ: ಎಸ್.ಟಿ.ಸೋಮಶೇಖರ್
Update: 2020-06-26 22:24 IST
ಕಲಬುರಗಿ, ಜೂ.26: ರಾಜ್ಯದಲ್ಲಿ ಬಿಜೆಪಿ ಸರಕಾರ ರಚಿಸುವಲ್ಲಿ ಮಾಜಿ ಸಚಿವ ರೋಷನ್ ಬೇಗ್ ಕಾರಣಕರ್ತರಾಗಿದ್ದಾರೆ. ಹೀಗಾಗಿ ಅವರು ಪುನಃ ಕಾಂಗ್ರೆಸ್‍ಗೆ ಹೋಗುವ ಪ್ರಶ್ನೆ ಬರುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ರಾಜೀನಾಮೆ ಕೊಟ್ಟಾಗಲೇ ರೋಷನ್ ಬೇಗ್ ರಾಜೀನಾಮೆ ನೀಡಿ ಬಿಜೆಪಿ ಸರಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಎಚ್.ವಿಶ್ವನಾಥ್ ಜತೆಗೆ ಅವರಿಗೂ ಸೂಕ್ತ ಸ್ಥಾನಮಾನ ನೀಡುವಂತೆ ಬಿಜೆಪಿ ವರಿಷ್ಟರಲ್ಲಿ ಮನವಿ ಮಾಡಿದ್ದೇವೆಂದು ತಿಳಿಸಿದರು.
ಕಾಂಗ್ರೆಸ್, ಜೆಡಿಎಸ್‍ಗೆ ಸೇರ್ಪಡೆಗೊಂಡಿರುವ ನಾವೆಲ್ಲರೂ ಎಚ್.ವಿಶ್ವನಾಥ್ ಹಾಗೂ ರೋಷನ್ ಬೇಗ್ ಜತೆಗಿದ್ದೇವೆ. ಅವರಿಗೆ ಅನ್ಯಾಯ ಆಗುವುದಕ್ಕೆ ಬಿಡುವುದಿಲ್ಲ. ಅವರಿಗೆ ಸೂಕ್ತ ಅವಕಾಶಗಳು ನೀಡುವಂತೆ ಬಿಜೆಪಿ ಹೈಕಮಾಂಡ್‍ಗೆ ಮನವಿ ಮಾಡಲಾಗಿದ್ದು, ಸೂಕ್ತ ಸಂದರ್ಭದಲ್ಲಿ ಸ್ಥಾನಮಾನ ನೀಡಲಿದ್ದಾರೆಂದು ತಿಳಿಸಿದರು.