ಬೆಳ್ತಂಗಡಿ : ಮನೆ ಮಂದಿಯನ್ನು ಕಟ್ಟಿಹಾಕಿ ಚಿನ್ನಾಭರಣ ಕಳವು

Update: 2020-06-26 17:05 GMT

ಬೆಳ್ತಂಗಡಿ, ಜೂ.26: ನಾಲ್ವರು ಮುಸುಕುಧಾರಿಗಳ ತಂಡವೊಂದು ಮನೆಗೆ ನುಗ್ಗಿ ಮನೆ ಮಂದಿಯನ್ನು ಕಟ್ಟಿಹಾಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿ ನಡೆದಿದೆ.

ಧರ್ಮಸ್ಥಳ ಗ್ರಾಮದ ನೀರಚಿಲುವೆ ಬಳಿಯ ಅಚ್ಯುತ ಭಟ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ರಾತ್ರಿ ಸುಮಾರು 2:30ರ ವೇಳೆಗೆ ಮನೆಗೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು ಕಟ್ಟಿ ಹಾಕಿ ಸುಮಾರು 13 ಲಕ್ಷ ರೂ. ನಗದು ಸಹಿತ 40 ಪವನ್ ಚಿನ್ನ ಹಾಗೂ 1 ಕೆಜಿ ಬೆಳ್ಳಿಯ ಅಭರಣಗಳನ್ನು ಕಳವುಗೈದಿದ್ದಾರೆ ಎಂದು ದೂರಲಾಗಿದೆ.

ಅಚ್ಯುತ ಭಟ್ ಉಜಿರೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು ರಾತ್ರಿ ಹೊತ್ತು ನಾಯಿ ಬೊಗಳಿದ ಶಬ್ದ ಕೇಳಿ ಬಾಗಿಲು ತೆರೆದಿದ್ದು ಈ ವೇಳೆ ಮನೆಯೊಳಗೆ ನುಗ್ಗಿದ್ದ ನಾಲ್ವರು ದರೋಡೆಕೋರರ ತಂಡ ಭಟ್ ಸೇರಿದಂತೆ ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ಮಾಡಿ ಪರಾರಿಯಾಗಿದೆ. ಅಲ್ಲದೆ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದರೆ ಜೀವಹಾನಿ ಮಾಡುದಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ., ಧರ್ಮಸ್ಥಳ ಪಿಎಸ್ಸೈ ಪವನ್ ನಾಯ್ಕ್ ಮತ್ತು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News