ಗ್ರೂಪ್-ಬಿ ಮತ್ತು ಸಿ ವರ್ಗದ ಅಧಿಕಾರಿಗಳ ವರ್ಗಾವಣೆ: ಸಚಿವರಿಗೆ ಅಧಿಕಾರ

Update: 2020-06-26 17:51 GMT

ಬೆಂಗಳೂರು, ಜೂ.26: 2020-21ನೇ ಸಾಲಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಸಿ ವರ್ಗದ ಅಧಿಕಾರಿ, ನೌಕರರಿಗೆ ಮಾತ್ರ ಅನ್ವಯವಾಗುವಂತೆ ಮಿತಿಗೊಳಿಸಿ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6 ಅನ್ನು ಮೀರದಂತೆ ಜುಲೈ 10ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಮಿತವ್ಯಯ ಕ್ರಮವಾಗಿ ಹಾಗೂ ಕೋವಿಡ್ ಕೆಲಸಗಳಿಗೆ ಧಕ್ಕೆಯಾಗಬಾರದೆಂಬ ಉದ್ದೇಶದಿಂದ, 2020-21ನೇ ಸಾಲಿನ ಸಾಮಾನ್ಯ ವರ್ಗಾವಣೆ ಮಾಡುವುದನ್ನು ಕೈಬಿಟ್ಟು ವಿರಳ ಪ್ರಕರಣಗಳಲ್ಲಿ ಮುಖ್ಯಮಂತ್ರಿಯ ಅನುಮೋದನೆ ಪಡೆದು ವರ್ಗಾವಣೆ ಮಾಡಬಹುದೆಂಬ ಆದೇಶ ಪ್ರಸ್ತುತ ಚಾಲ್ತಿಯಲ್ಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News