ಚಿಕ್ಕಮಗಳೂರು: ನಾಲ್ವರಲ್ಲಿ ಕೊರೋನ ಪಾಸಿಟಿವ್; 24ಕ್ಕೇರಿದ ಸೋಂಕಿತರ ಸಂಖ್ಯೆ

Update: 2020-06-26 18:03 GMT
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು, ಜೂ.26: ಶುಕ್ರವಾರ ಜಿಲ್ಲೆಯ ನಾಲ್ವರಲ್ಲಿ ಕೊರೋನ ಪಾಸಿಟಿವ್ ಇರುವುದು ಬೆಳಕಿಗೆ ಬಂದಿದ್ದು, ಸೋಂಕಿತರ ಸಂಖ್ಯೆ 24ಕ್ಕೇರಿದೆ.

ನಾಲ್ವರು ಸೋಂಕಿತರ ಪೈಕಿ ಮೂರು ಪ್ರಕರಣಗಳು ಶೃಂಗೇರಿ ಪಟ್ಟಣದಲ್ಲಿ ವರದಿಯಾಗಿದ್ದು, ಈ ಮೂವರು ಒಂದೇ ಕುಟುಂಬದವರಾಗಿದ್ದಾರೆಂದು ತಿಳಿದುಬಂದಿದೆ. ಈ ಮೂವರು ಮಹಾರಾಷ್ಟ್ರದಿಂದ ಇತ್ತೀಚೆಗೆ ಪಟ್ಟಣಕ್ಕೆ ಆಗಮಿಸಿದ್ದು, ಪಟ್ಟಣದ ಸಚ್ಚಿದಾನಂದ ಬಾಲಕಿಯರ ವಸತಿ ನಿಲಯದಲ್ಲಿ ಮೂವರನ್ನೂ ಕ್ವಾರಂಟೈನ್ ಮಾಡಲಾಗಿತ್ತು. ಗುರುವಾರ ಈ ಮೂವರ ಗಂಟಲ ದ್ರವ, ರಕ್ತದ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಶುಕ್ರವಾರ ಮೂವರಲ್ಲೂ ಪಾಸಿಟಿವ್ ಇರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ. ಇನ್ನೊಂದು ಪಾಸಿಟಿವ್ ಪ್ರಕರಣ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ದಲ್ಲಿ ಕಂಡು ಬಂದಿದೆ. 

ನಾಲ್ವರು ಸೋಂಕಿತರನ್ನು ನಗರದ ಕೊರೋನ ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದ್ದು, ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಗಳ ಪತ್ತೆಗೆ ಜಿಲ್ಲಾಡಳಿತ ಕ್ರಮ ವಹಿಸಲಾಗಿದೆ ಎಂದು ತಿಳಿದು ಬಂದಿದೆ. ಶುಕ್ರವಾರ ಪತ್ತೆಯಾದ ನಾಲ್ಕು ಪ್ರಕರಣಗಳೂ ಸೇರಿ ಜಿಲ್ಲೆಯಲ್ಲಿ ಸದ್ಯ 24 ಸಕ್ರೀಯ ಪ್ರಕರಣಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News