ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

Update: 2020-06-27 13:49 GMT

ಬೆಂಗಳೂರು, ಜೂ. 27: 'ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೋನ ವಾರಿಯರ್ಸ್ ಎಂದು ಘೋಷಿಸಲಾಗಿದೆ. ಕಾರ್ಯನಿರತ ಪತ್ರಕರ್ತರನ್ನು(ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, 'ಕೊರೋನ ವೈರಸ್ ಸೋಂಕು ತಗಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತ ಚಿಕಿತ್ಸೆ ಒದಗಿಸಲು ರಾಜ್ಯ ಸರಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಲಿ' ಎಂದು ಸಲಹೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News