ಕಾಪು ತಾಲೂಕಿನ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನ ಸೋಂಕು ದೃಢ

Update: 2020-06-28 08:37 GMT

ಕಾಪು, ಜೂ. 28: ಕಾಪು ತಾಲೂಕಿನ ಎಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈಕೆ ಜೂ.25ರ ಎಸೆಸೆಲ್ಸಿ ಕನ್ನಡ ಮತ್ತು ಜೂ.27ರಂದು ನಡೆದ ಗಣಿತ ಪರೀಕ್ಷೆಯನ್ನು ಬರೆದಿದ್ದರು. ಈಕೆಯ ತಂದೆಯ ಗಂಟಲು ದ್ರವದ ಮಾದರಿ ಪರೀಕ್ಷೆ ವರದಿಯು ಜೂ.27ರಂದು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಈಕೆಯನ್ನು ಕೂಡ ಇದೇ ದಿನ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಜೂ.28ರಂದು ಈ ಪರೀಕ್ಷೆಯ ವರದಿ ಬಂದಿದ್ದು, ಇದರಲ್ಲಿ ಪಾಸಿಟಿವ್ ಎಂಬುದು ದೃಢಪಟ್ಟಿದೆ. ಇದರಿಂದ ಈಕೆ ಜೂ.29ರಂದು ನಡೆಯುವ ವಿಜ್ಞಾನ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗಿದ್ದಾರೆ. ಈಕೆ ಪ್ರತಿಭಾವಂತ ವಿದ್ಯಾರ್ಥಿನಿ.

’ಈಕೆ ಪರೀಕ್ಷೆ ಬರೆದ ಕೇಂದ್ರದಲ್ಲಿ ಸುರಕ್ಷಿತ ಅಂತರ, ಸ್ಯಾನಿಟೈಸರ್ ಸೇರಿದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಿರು ವುದರಿಂದ ಇತರ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸುವ ಅಗತ್ಯ ಇಲ್ಲ ಎಂದು ಆರೋಗ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News